ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ, ನಿವೃತ್ತ ನೌಕರರಿಗೆ ಹಾಗೂ ಉತ್ತಮ ಸಾಧನೆಗೈದ ನೌಕರರ ಮಕ್ಕಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮ ಭವ್ಯವಾಗಿ ನಡೆಯಿತು. ಸೋಮವಾರ ಸಂಜೆ 7 ಗಂಟೆಗೆ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಭಾಗವಹಿಸಿದರು. ರಾಜ್ಯ ಸರ್ಕಾರಿ ನೌಕರರ ಹಿತಾಸಕ್ತಿಗಾಗಿ ಸಂಘ ಕೈಗೊಂಡ ಕಾರ್ಯವೈಖರಿ ಹಾಗೂ ಸಾಧನೆಗಳನ್ನು ಈ ಸಂದರ್ಭದಲ್ಲಿ ಅವರು ವಿವರಿಸಿದರು. ಪಾವಗಡ ಶಾಸಕರಾದ ಎಚ್.ವಿ. ವೆಂಕಟೇಶ್ ಮಾತನಾಡಿ, ನೌಕರರ ಸೇವಾ ಮನೋಭಾವ ರಾಜ್ಯದ ಅಭಿವೃದ್ಧಿಗೆ ಅಡಿಪಾಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಜಪಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದರ