ರಾಯಚೂರು ಜಿಲ್ಲೆಯ ಲಿಂಗಸುಗೂರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಮಧ್ಯಾನ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಮಾನಪ್ಪ ವಜ್ಜಲ ಭಾಗವಹಿಸಿ ಮಾತನಾಡಿ, ಶೋಷಿತರು ಮತ್ತು ಹಿಂದುಳಿದವರ ಪ್ರಯೋಭಿವೃದ್ಧಿಗೆ ಶ್ರಮಿಸಿದ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಪಾಟೀಲ್, ಮಂಡಲ ಅಧ್ಯಕ್ಷ ಕೆ ನಾಗಭೂಷಣ, ಮಹಿಳಾ ಮೋರ್ಚಾ ಅಧ್ಯಕ್ಷ ರತ್ನಮ್ಮ ಸಕ್ರಿ ದಂತೆ ಅನೇಕರು ಭಾಗವಹಿಸಿದ್ದರು.