ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಇದೇ ಸೆಪ್ಟೆಂಬರ್ 15 ರಿಂದ 45 ದಿನಗಳ ಕಾಲ ನಡೆಯಲಿದ್ದು ವ್ಯವಸ್ಥಿತವಾಗಿ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳುವಂತೆ ಸಂಬಂದಿಸಿದ ಅಧಿಕಾರಿಗಳು ಜಿಲ್ಲಾಧಿಕಾರಿ ಆನಂದ್ ಕೆ ಸೂಚನೆ ನೀಡಿದರು. ಶುಕ್ರವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಮತ್ತು ಮಾಜಿದೇವದಾಸಿ ಮಹಿಳೆಯರ ಮರು ಸಮೀಕ್ಷೆ ಬಿತ್ತಿ ಚಿತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.