ಸಾಗರ ನಗರದ ನೆಹರು ನಗರದ ನಿವಾಸಿ ಹಾಗೂ ಗಜಾನನ ಸಾರಿಗೆ ಸಂಸ್ಥೆಯ ನಿವೃತ್ತ ಉದ್ಯೋಗಿ 73 ಬರ್ಷದ ಕೋಟಿ ಶೆಟ್ಟಿ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ನಡೆದಿದೆ. ಕೋಟಿ ಶೆಟ್ಟಿ ಅವರು ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಎರಡು ಕಣ್ಣುಗಳು ಸರಿಯಾಗಿ ಕಾಣದೆ ಇರುವುವರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ. ನನ್ನ ಕುಟುಂಬಕ್ಕೆ ಸಮಸ್ಯೆ ಮಾಡಬೇಡಿ ಎಂದು ಬರೆದಿದ್ದಾರೆ. ಈ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.