ಹಿಂದುಳಿದ ವರ್ಗಕ್ಕೆ ಸೇರಿದ ನೇಕಾರ ಸಮುದಾಯದ ಜನಸಂಖ್ಯೆಯನ್ನು ಸರ್ಕಾರದ ಗಮನಕ್ಕೆ ತರಲು ಸಮುದಾಯವೇ ಸ್ವತಃ ಅಭಿವೃದ್ಧಿಪಡಿಸಿದೆ ಎಂದು ನೇಕಾರ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷ ಸೋಮಶೇಖರ ತಿಳಿಸಿದರು. ರಾಯಚೂರು ನಗರದ ಪತ್ರಿಕ ಭವನದಲ್ಲಿ ಭಾನುವಾರ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಆಪ್ ಮೂಲಕ ರಾಜ್ಯದ ನೇಕಾರರು ತಮ್ಮ ಕುಟುಂಬ ಸದಸ್ಯರ ಮಾಹಿತಿಯನ್ನು ಸುಲಭವಾಗಿ ಒದಗಿಸಬಹುದಾಗಿದೆ ಜಿಲ್ಲಾವಾರು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸಮುದಾಯದ ಜಾತಿಗಣತಿ ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು. ಮುಖಂಡ ಸಿ.ಎನ್ ಭಂಡಾರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.