ನಗರದ ತಾ.ಕಚೇರಿ ಮುಂಭಾಗದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದು ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು. ಹಿಂದುಗಳ ಧಾರ್ಮಿಕ ಶ್ರದ್ಧೆ ಕೇಂದ್ರವಾಗಿರುವ ಶ್ರೀಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಕನ್ನು ಕಠಿಣ ಕಾನೂನು ಕ್ರಮಕ್ಕೆ ಗುರಿಪಡಿಸಬೇಕು. ಅನಾಮಿಕ ವ್ಯಕ್ತಿ ಆಧಾರಗಳಿಲ್ಲಿದೆ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರ ಲಕ್ಷಾಂತರ ಹಣ ಖರ್ಚು ಮಾಡಿ ಗುಂಡಿಗಳು ತೆಗೆದಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರ್ ಸ್ವಾಮಿ ಆರೋಪ ಮಾಡಿದರು. ಈ ವೇಳೆ ತಾಲ್ಲೂಕು ಅಧ್ಯಕ್ಷ ಸುರೇಶ್, ಮುಖಂಡರಾದ ಜಯಪಾಲಯ್ಯ, ವೆಂಕಟೇಶ್ ಯಾದವ್ ಸೇರಿದಂತೆ ಮುಂತಾದವರು ಇದ್ದರು.