ಅಕ್ರಮವಾಗಿ ಪಡಿತರ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ನಡೆದಿದ್ದು ಗುರುವಾರದಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ. ಹನೂರು ತಾಲೂಕಿನ ಎಲ್ಲೆಮಾಳ ಗ್ರಾಮದ ಸಮೀವುಲ್ಲಾ ಮತ್ತು ಮಳವಳ್ಳಿ ಪಟ್ಟಣದ ಮಹೇಶ್ ಬಂಧಿತರು. ಗ್ರಾಮಾಂತರ ಪ್ರದೇಶಗಳಿಂದ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ 451 ಕೆಜಿ ಅಕ್ಕಿ, 69 ಕೆಜಿ ರಾಗಿಯನ್ನು ವಶ ಪಡಿಸಿಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಪಡಿತರ ವಶಕ್ಕೆ ಪಡೆದಿದ್ದಾರೆ.