ಪಂಚ ಗ್ಯಾರಂಟಿಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದುವರೆಗೂ ಒಂಬತ್ತು ಲಕ್ಷ ಮಂದಿಗೆ 2,000 ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಂ.ಸಿ ಶಿವಾನಂದ ಸ್ವಾಮಿ ತಿಳಿಸಿದರು. ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದರು.