ಹಾಸನ: ಹಾಸನ ಜಿಲ್ಲೆಯ ಹೊಳೆನರಸೀಪುರ ತಾ. ಮೊಸಳೆ ಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದು ಅವಗಡ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಗೆ ಮಾಜಿ ಸಚಿವ ಸಿ ಟಿ ರವಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಾಯಲುಗಳ ಜೊತೆ ಸಮಾಲೋಚನೆ ನಡೆಸಿದ ಸಿಟಿ ರವಿ, ಗಾಯಾಳುಗಳಿಗೆ ಅಗತ್ಯ ಇರುವ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿ ಯಲ್ಲಿ ಯಾರು ಊಹಿಸದ ದುರಂತ ಒಂದು ನೆನ್ನೆ ನಡೆದಿದೆ, ಟ್ರಕ್ ಚಾಲಕನ ನಿರ್ಲಕ್ಷ್ಯಕ್ಕೆ ಸುಮಾರು 9 ಮಂದಿ ಮೃತಪಟ್ಟು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಕಾರಣ ಏನು ಎಂದು ತಿಳಿಯಬೇಕಿದೆ ಎಂದರು.