ರಾಯಚೂರು ಜಿಲ್ಲೆಯಲ್ಲಿ ಅನೇಕರು ಸ್ವತಃ ನಾವೇ ನಿಂತು ಪಕ್ಷದ ಧ್ವಜ ಬ್ಯಾನರ್ ಬಂಟಿಂಗ್ ಗಳನ್ನು ಕಟ್ಟಿ ಪಕ್ಷವನ್ನು ಕಟ್ಟಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ್ ಮಾತನಾಡಿದರು. ರಾಯಚೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಹಾಗೂ ಸಭೆಯ ಉದ್ದೇಶಿಸಿ ಮಾತನಾಡಿದರು, ಮುಂಬರುವ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಕಟ್ಟಿ ಬೆಳೆಸುವ ನಿಟ್ಟಿನಲ್ಲಿ ತಾವೆಲ್ಲರೂ ಕೂಡ ಮುಂದಾಗಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.