ಬನವಾಸಿ: ಶಾಸಕ ಶಿವರಾಮ ಹೆಬ್ಬಾರ್ ಬನವಾಸಿ ಹೋಬಳಿ ವ್ಯಾಪ್ತಿಯ ಕಲ್ಲಿ ಗ್ರಾಮದ ಶ್ರೀ ಮೂರಾರ್ಜಿ ದೇಸಾಯಿ ಪದವಿಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಈ ಸಾಲಿನಲ್ಲಿ ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕವನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ವಿಧ್ಯಾರ್ಥಿ ವೇತನವನ್ನು ನೀಡಿ ಶುಭ ಹಾರೈಸಿದರು.