ಚಾಮರಾಜನಗರದ ನಗರಸಭೆ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಗರಸಭೆ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ದಾಳಿ ನಡೆಸಿ ಎಲ್ಲಾ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಗರಸಭೆಯ ಕಂದಾಯ ಶಾಖೆ, ಆರೋಗ್ಯ ಶಾಖೆ, ತಾಂತ್ರಿಕ ಶಾಖೆ ಹಾಗೂ ನಗರಸಭೆ ಪೌರಾಯುಕ್ತರ ಕಚೇರಿಯ ಮೇಲೆ ಏಕಕಾಲದಲ್ಲಿ ಲೋಕಾಯುಕ್ತರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.