ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಒಂದು ಟಾರ್ಗೆಟ್ ನೀಡಿದ್ದು, ಸಂಸತ್ ಖೇಲ್ ಮಹೋತ್ಸವ-2025 ಯೋಜನೆಯನ್ನು ಜಾರಿಗೊಳಿಸಿದ್ದಾರೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ತಿಳಿಸಿದರು. ಗುರುವಾರ ಶಿವಮೊಗ್ಗದಲ್ಲಿ ಮಾತನಾಡಿದ ಅವರು ಕ್ರೀಡೆ ಮತ್ತು ಫಿಟ್ನೆಸ್ ಮೂಲಕ ದೇಶದ ಕ್ರೀಡಾಪಟುಗಳಿಗೆ ಗುರುತಿಸಲು ಈ ಯೋಜನೆಯನ್ನ ಜಾರಿಗೊಳಿಸಲಾಗಿದ್ದು, ಸೆಪ್ಟೆಂಬರ್ 21ರಿಂದ ಡಿಸೆಂಬರ್ 25ರ ವರೆಗೆ ಮೂರು ಹಂತದಲ್ಲಿ ಕ್ರೀಡೆಗಳನ್ನು ನಡೆಸಲು ಯೋಜಿಸಲಾಗಿದೆ.ಗ್ರಾಮ ಪಂಚಾಯಿತಿ ಮಟ್ಟ, ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಸ್ಪರ್ಧೆಗಳು ಆಯೋಜಿಸಲಾಗಿದೆ. ನಾಳೆ ಶುಕ್ರವಾರದಂದು ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸಂಸತ್ ಖೇಲ್ 2025ರ ಪೋರ್ಟಲ್ ಗೆ ಚಾಲನೆ ನೀಡಲಾಗುವುದು ಎಂದರು.