ವಿಜಯಪುರ ಜಿಲ್ಲೆಯಲ್ಲಿ ಧಾರಾಕಾರ ಮಳೆ ಅವಾಂತರಕ್ಕೆ ಹಾಗೂ ಮಹಾರಾಷ್ಟ್ರದಿಂದ ಭಿಮಾ ನದಿಗೆ ಅಪಾರ ಪ್ರಮಾಣದ ನೀರು ಹರಿಬಿಟ್ಟ ಹಿನ್ನಲೆ, ಜಿಲ್ಲೆಯಲ್ಲಿ ಸುಮಾರು ನಾಲ್ಕು ಲಕ್ಷ ಎಕರೆ ಬೆಳೆಯು ಸಂಪೂರ್ಣವಾಗಿ ಹಾಳಾಗಿದೆ ಮತ್ತು ಸುಮಾರು 1,200 ಮನೆಗಳು ಮಳೆಗೆ ನೆಲಸಮವಾಗಿದ್ದಾವೆ ಇನ್ನು ಸಂತ್ರಸ್ತರಿಗೆ ತುರ್ತು ಪರಿಹಾರವಾಗಿ 5ಸಾವಿರ ರೂಪಾಯಿಗಳನ್ನು ನೀಡಿದ್ದೇವೆ. ಇನ್ನೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೈಮಾಹಿಕ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುತ್ತಾರೆ. ಎಂದು ವಿಜಯಪುರದಲ್ಲಿ ಸೋಮವಾರ ಸಾಯಂಕಾಲ 4ಗಂಟೆ ಸುಮಾರುಗೆ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದರು.