ಗುಂಡ್ಲುಪೇಟೆ ಪಟ್ಟಣದ ಮಡಹಳ್ಳಿ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ನಿಗಧಿತ ಕಾಲಮಿತಿಯೊಳಗೆ ಕೆಲಸ ಮುಗಿಸುವಂತೆ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಮಡಹಳ್ಳಿ ರಸ್ತೆಗೆ ಹೊಂದಿಕೊಂಡಂತೆ ನಿರ್ಮಾಣವಾಗುತ್ತಿರುವ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು, ರಸ್ತೆ ಹದಗೆಡುವ ಜತೆಗೆ ಮಳೆನೀರು ಸಂಗ್ರಹವಾಗಿ ಮಡಹಳ್ಳಿ ರಸ್ತೆಯಲ್ಲಿ ಸಂಚಾರ ದುಸ್ಥರವಾಗಿತ್ತು. ಈ ಹಿನ್ನೆಲೆಯಲ್ಲಿ ಆದ್ಯತೆಯಲ್ಲಿ 2.25 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಎರಡು ಬದಿಯಲ್ಲಿ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ ಎಂದರು.