ಆಗಸ್ಟ್ 29, ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕಂಪ್ಲಿ ನಗರದ ಷಾಮಿಯಾಚಂದ್ ಸರ್ಕಾರಿ ಬಾಲಕರ ಶಾಲಾ ಆವರಣದಲ್ಲಿ ವಲಯ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.ಈ ಕ್ರೀಡಾಕೂಟಕ್ಕೆ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಮಲ್ಲನಗೌಡ ರವರು ಚಾಲನೆ ನೀಡಿದರು.ಚಾಲನೆ ನೀಡಿ ಮಾತನಾಡಿದ ಅವರು,ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ಮನೋಭಾವವು ಮಕ್ಕಳಲ್ಲಿ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕಾರಣವಾಗುತ್ತದೆ. ವಿದ್ಯಾರ್ಥಿಗಳು ಕ್ರೀಡಾಂಗಣದಲ್ಲಿ ತೋರಿಸುವ ಶಿಸ್ತು, ಸಹನೆ ಹಾಗೂ ಜತೆಗೂಡುವ ಮನೋಭಾವವು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಬೆಳೆಸುತ್ತದೆ” ಎಂದು ಹೇಳಿದರು.ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಹಾಜರಿದ್ದರು.