ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರ ಧರ್ಮಸ್ಥಳದ ಮೇಲೆ ಆಗುತ್ತಿರುವಂತ ಅಪಪ್ರಚಾರದ ವಿರುದ್ಧ ಹಾಗೂ ಅದನ್ನು ತಡೆಯುವಲ್ಲಿ ವಿಫಲವಾಗಿರತಕ್ಕಂಥ ರಾಜ್ಯ ಸರ್ಕಾರದ ಧೋರಣೆಯನ್ನ ಖಂಡಿಸಿ ಭಾರತೀಯ ಜನತಾ ಪಾರ್ಟಿ ಮಡಿಕೇರಿಯ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿತ್ತು. ಧರ್ಮಸ್ಥಳ ವಿರುದ್ಧ ಅಪ್ರಚಾರ ಮಾಡುತ್ತಿರುವವರು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಬಳಿಕ ಮಾತನಾಡಿದ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಮಾತನಾಡಿ ಧರ್ಮಸ್ಥಳದ ವಿರುದ್ಧ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಇದು ಸರಿಯಲ್ಲ. ಅಧಿಕಾರಿಗಳು ಮಾಡದ ಕೆಲಸವನ್ನ ಮಾಧ್ಯಮಗಳು ಮಾಡುತ್ತಿವೆ. SIT ಯಲ್ಲಿ ಉತ್ತಮ ಅಧಿಕಾರಿಗಳಿದ್ದು ಅವರಿಗೆ ಸರ್ಕಾರ ಫ್ರೀ ಹ್ಯಾಂಡ್ ನೀಡಬೇಕು ಎಂದರು