ಶಿಕಾರಿಪುರ ತಾಲೂಕಿನ ಪುನೇದಹಳ್ಳಿ, ಕುಸ್ಕೂರು, ಹಿರೇಜಂಬೂರು ಗ್ರಾಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಪರ್ಕ ಕಲ್ಪಿಸುವಂತೆ ಶಿಕಾರಿಪುರ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಗೆ ಶಿಕಾರಿಪುರ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ರವಿ ನಾಯ್ಕ.ಡಿ ಅವರು ಸೋಮವಾರ ಮನವಿ ಸಲ್ಲಿಸಿದ್ದಾರೆ. ಏನು ಪುನದಹಳ್ಳಿ ಕುಸ್ಕೂರು ಹಿರೇ ಜಂಬೂರು ಗ್ರಾಮಗಳ ಮೂಲಕ ಹೋಗಲು ಈಗಾಗಲೇ ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಇರುವುದರಿಂದ ವಿದ್ಯಾರ್ಥಿಗಳಿಗೆ ಓಡಾಡಲು ತುಂಬಾ ತೊಂದರೆ ಆಗ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಣ ಮಾಡುವ ಹಿನ್ನೆಲೆ ಕಾಲೇಜು ಶಾಲಾ ವಿದ್ಯಾರ್ಥಿಗಳನ್ನು ಅಲ್ಲೇ ಬಿಟ್ಟು ಹೋಗಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.