ಚಿತ್ರದುರ್ಗ ತಾಲ್ಲೂಕಿನ ಗೊಲ್ಲನಕಟ್ಟೆ ಗ್ರಾಮದಲ್ಲಿ ಚಿಕನ್ ಗುನ್ಯಾ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸಾರ್ವಜನಿಕರು ಹೈರಾಣಾಗಿದ್ದಾರೆ. ಈ ಕುರಿತು ಬುಧವಾರ ಮಧ್ಯಾಹ್ನ 2 ಗಂಟೆಗೆ ಸ್ಪಷ್ಟನೆ ನೀಡಿರುವ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಂಬಳಿ ಮಠ್ ಮಾತನಾಡಿ ಗೊಲ್ಲನಕಟ್ಟೆ ಗ್ರಾಮದಲ್ಲಿ ಜ್ವರ, ಕೀಲು ನೋವಿನಿಂದ ಜನರು ಬಳಲುತ್ತಿದ್ದಾರೆ. ಕೂಡಲೇ ನಮ್ಮ ಇಲಾಖೆಯ ಅಧಿಕಾರಿಗಳು ರಕ್ತ ಮಾದರಿ ಕಲೆ ಹಾಕಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದರು. ಅಲ್ಲದೆ ಗ್ರಾಮದಲ್ಲಿ 185 ಮನೆಗಳಿದ್ದು, 850 ಜನಸಂಖ್ಯೆ ಇದೆ, ಯಾರೂ ಕೂಡಾ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಇನ್ನೂ ಎಲ್ಲಾ ರೀತಿಯಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದರು