ದಿಗ್ಗಿ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿ 11 ಕುರಿಗಳು ಸಾವು, ಕುಟುಂಬಸ್ಥರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದಿಗ್ಗಿ ಗ್ರಾಮದಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿ 11 ಕುರುಗಳು ಸಾವನ್ನಪ್ಪಿದ್ದು ಮಾಹಿತಿ ತಿಳಿಯುತ್ತಿದ್ದಂತೆ ದಿಗ್ಗಿ ಗ್ರಾಮಕ್ಕೆ ಮಂಗಳವಾರ 12 ಗಂಟೆ 30 ನಿಮಿಷಕ್ಕೆ ಶರಣಬಸಪ್ಪ ಗೌಡ ದರ್ಶನಪುರ್ ಹಾಗೂ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರಾದ ಮಹಾಮಂಡಲದ ನಿರ್ದೇಶಕ ಶಾಂತಗೌಡ ಪಾಟೀಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು, ಆದಷ್ಟು ಬೇಗ ಸರ್ಕಾರದಿಂದ ಪರಿಹಾರ ಕೊಡುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ಕುಟುಂಬಸ್ಥರು ಭಾಗವಹಿಸಿದ್ದರು