ರಾಯಚೂರು ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಜಲನಿರ್ಮಲ ಯೋಜನೆ ಸಭಾಂಗಣದಲ್ಲಿ ಸೋಮವಾರ ಮಧ್ಯಾನ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪ್ರಾಧಿಕಾರದ ಅಧ್ಯಕ್ಷ ಪಾಮಯ್ಯ ಮುರಾರಿ ವಹಿಸಿದರು. ಈ ಸಂದರ್ಭದಲ್ಲಿ ಪಂಚೆ ಗ್ಯಾರಂಟಿಗಳಾದ ಗೃಹಲಕ್ಷ್ಮಿ,ಅನ್ನ ಭಾಗ್ಯ,ಶಕ್ತಿ,ಗ್ರಹ ಜ್ಯೋತಿ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನ ಕುರಿತು ಹಾಗೂ ಜಿಲ್ಲೆಯಲ್ಲಿ ಸಮರ್ಪಕ ಜಾರಿಗೊಳಿಸುವುದರ ಕುರಿತು ಚರ್ಚೆ ನಡೆಯಿತು. ಸಭೆಯಲ್ಲಿ ಪ್ರಾಧಿಕಾರದ ಸದಸ್ಯರು ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉದ್ಯೋಗ ಅಧಿಕಾರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.