ಮಳವಳ್ಳಿ : ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಕನ್ನಡದ ಹೆಸರಾಂತ ಬರಹ ಗಾರ್ತಿ ನಾಡಿನ ಘನತೆಯನ್ನು ವಿಶ್ವ ಮಟ್ಟದಲ್ಲಿ ಮೆರೆದ ಹೆಮ್ಮೆಯ ಬಾನು ಮುಷ್ತಾಕ್ ಆಯ್ಕೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಮತ್ತು ಅದಕ್ಕಾಗಿ ರಾಜ್ಯ ಸರಕಾರವನ್ನು ಅಭಿನಂದಿ ಸುತ್ತದೆ ಎಂದಿರುವ ಸಂಘದ ಅಧ್ಯಕ್ಷ ಎನ್ ಎಲ್ ಭರತ್ ರಾಜ್ ಈ ಆಯ್ಕೆ ಯನ್ನು ವಿರೋಧಿಸುತ್ತಿರುವ ಬಿಜೆಪಿ ಹಾಗೂ ಕೋಮುವಾದಿ ಶಕ್ತಿಗಳ ನಡೆಯನ್ನು ಖಂಡಿಸಿದ್ದಾರೆ. ಮಳವಳ್ಳಿ ಪಟ್ಟಣದಲ್ಲಿ ಬುಧವಾರ ಸಾಯಂಕಾಲ 6 ಗಂಟೆ ಸಮಯ ದಲ್ಲಿ ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು ನಾಡ ಹಬ್ಬದಲ್ಲೂ ಬಿಜೆಪಿ ಧರ್ಮ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದರು.