ತುಂಗಭದ್ರಾ ಜಲಾಶಯದಿಂದ ಆಗಸ್ಟ್ 28, ಗುರುವಾರ ಸಂಜೆ 4 ಗಂಟೆಗೆ ನದಿಗೆ 50 ಸಾವಿರ ಕ್ಯುಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ತೀರ ಪ್ರದೇಶಗಳಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ, ಗಣೇಶ ಹಬ್ಬದ ಅಂಗವಾಗಿ ಕಂಪ್ಲಿ ಪ್ರದೇಶದಲ್ಲಿ ತುಂಗಭದ್ರಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಹಾಗೂ ನದಿ ತೀರದಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರು ಸೂಚಿಸಿದ್ದಾರೆ.