ಮಂಡ್ಯ : ಮಳವಳ್ಳಿ ವಿಧಾನ ಸಭಾ ಕ್ಷೇತ್ರದ ಮಳವಳ್ಳಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷರನ್ನಾಗಿ ಯುವ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ನರೇಂದ್ರಸ್ವಾಮಿ ಅವರ ಕಟ್ಟಾ ಅಭಿಮಾನಿ ಬಂಡೂರು ಗ್ರಾಮದ ಎನ್ ಬಿ ದೇವರಾಜು ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ಶಾಸಕ ರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದ ಪಿ ಎಂ ನರೇಂದ್ರಸ್ವಾಮಿ ಅವರ ಶಿಫಾರ ಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾ ದಳದ ರಾಜ್ಯಾ ಧ್ಯಕ್ಷರಾದ ಎಂ ರಾಮಚಂದ್ರ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಭಾನುವಾರ ಸಾಯಂಕಾಲ 5.30 ರ ಸಮಯದಲ್ಲಿ ಮಂಡ್ಯ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಏರ್ಪಾಡಾಗಿದ್ದ ಸಮಾರಂಭದಲ್ಲಿ ನೇಮಕ ಪತ್ರ ವಿತರಿಸಲಾಯಿತು.