ಧಾರವಾಡ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಶನಿವಾರ ಮದ್ಯಾಹ್ನ 2 ಗಂಟೆಗೆ ನಡೆಯಿತು. ವಿಚಾರ ಸಂಕಿರಣಕ್ಕೆ ಚಾಲನೆ ನೀಡಿದ ಬಸವ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ. ಅರವಿಂದ ಜತ್ತಿ ಮಾತನಾಡಿ, ಶರಣರ ವಚನಗಳು ಇಂದಿಗೂ ಪ್ರಸ್ತುತವಾಗಿವೆ. ವಚನಗಳನ್ನು ಕೇವಲ ಭಾಷಣಕ್ಕೆ ಮಾತ್ರ ಬಳಸಿಕೊಳ್ಳದೇ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.