ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಕಾರಣ, ತಾಲ್ಲೂಕಿನಾದ್ಯಂತ ಬಿತ್ತನೆ ಕಾರ್ಯಗಳು ಮುಗಿಸಿದ್ದಾರೆ. ಆದರೆ, ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಲಭ್ಯವಾಗುತ್ತಿಲ್ಲ.ಇದರಿಂದಾಗಿ ತಾಲ್ಲೂಕಿನ ಹೋಬಳಿಗಳಾದ ಕಸಬಾ, ಸೋಮೇನಹಳ್ಳಿ ರೈತ ಸಂಪರ್ಕ ಕೇಂದ್ರ, ಟಿಎಪಿಸಿಎಂಎಸ್(ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ) ಮತ್ತು ಖಾಸಗಿ ಅಂಗಡಿಗಳ ಮುಂದೆ ರಸಗೊಬ್ಬರ ಪಡೆಯಲು ರೈತರು ಸಾಲುಗಟ್ಟಿ ನಿಲ್ಲುವ ಅನಿವಾರ್ಯತೆ ಎದುರಾಗಿದೆ.