ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಕಾಡಾನೆ ಮಾನವ ಸಂಘರ್ಷ ವಿಪರೀತವಾಗಿದೆ ರೈತರು ಬೆಳೆಗಾರರು ದಿನ ಬೆಳಗಾದ್ರೆ ಸಾಕು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳೋಕ್ಕೆ ಹರಸಾಹಸ ಪಡುವಂತಾಗಿದೆ. ಕಾಡುಪ್ರಾಣಿಗಳ ಹಾವಳಿ, ಕಾಡಿನಿಂದ ತೋಟಗಳಿಗೆ ಲಗ್ಗೆ ಇಡೋ ಕಾಡಾನೆಗಳ ಹಿಂಡು ಕಾಫಿ, ಅಡಕೆ, ಬಾಳೆ ಬೆಳೆಗಳನ್ನ ನಾಶ ಮಾಡುತ್ತಿವೆ. ವರ್ಷ ಪೂರ್ತಿ ಕಷ್ಟಪಟ್ಟು ಕಣ್ಣಲ್ಲಿ ಕಣ್ಣಿಟ್ಟು ಬೆಳೆಸಿದ ಫಸಲು ನಾಶವಾಗುತ್ತಾ ಇರೋದ್ರಿಂದ ರೈತರು ಕಂಗಾಲಾಗಿದ್ದಾರೆ. ಜೊತೆಗೆ ಆನೆಗಳು ಮನುಷ್ಯರ ಮೇಲೂ ಎರಗಿ ಪ್ರಾಣ ಹಾನಿ ಮಾಡುತ್ತಿವೆ. ಇದನ್ನೆಲ್ಲಾ ಗಮನಿಸಿದ ಖಾಸಗಿ ಸಂಸ್ಥೆಯೊಂದು ರೈತರ ಸಮಸ್ಯೆಗೆ ಬ್ರೇಕ್ ಹಾಕಲು ಹೊಸ ಡಿವೈಸ್ ಕಂಡು ಹಿಡಿದಿದೆ.ಬೆಂಗಳೂರು ಮೂಲದ ಖಾಸಗಿ ಕಂಪೆನಿ ರೈತರಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಮೂರು