ಕೆ.ಎನ್. ರಾಜಣ್ಣ ಅವರಿಗೆ ಮಂತ್ರಿ ಸ್ಥಾನ ಕೊಡದಿದ್ದರೆ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ನಾವುಗಳು ಒಂದು ಮತವನ್ನ ಕಾಂಗ್ರೆಸ್ ಗೆ ಹಾಕುವುದಿಲ್ಲ ಎಂದು ಕನ್ನಡ ಸೇನೆ ಸಂಘಟನೆ ಜಿಲ್ಲಾಧ್ಯಕ್ಷ ದನಿಯಾ ಕುಮಾರ್ ಹೇಳಿದರು.ಅವರು ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಹೈಕಮಾಂಡ್ ನಿಂದ ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಹಿಂದುಳಿದ ವರ್ಗಗಳ ಒಕ್ಕೂಟ ಸೇರಿದಂತೆ ಹಲವು ಸಂಘಟನೆ ನಡೆಸಿದ ಒಂದು ದಿನದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಸೋಮವಾರ ಮಧ್ಯಾಹ್ನ ಸುಮಾರು 3 ರ ಸಮಯದಲ್ಲಿ ಮಾತನಾಡಿದರು.ಕೆ. ಎನ್. ರಾಜಣ್ಣ ಅವರು ಸಹಕಾರ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದರು.