ಶಿರಸಿ : ಕಳೆದ ಎರಡು ದಿನದ ಹಿಂದೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಮುಂದುವರೆಸಿರುವ ಶಿರಸಿ ನಗರ ಪೊಲೀಸರು ಅಕ್ರಮ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊರ್ವ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿರಸಿಯ ಮರಾಠಿಕೊಪ್ಪದ ಮಣಿಕಂಠ ಮಾರುತಿ ಪೂಜಾರಿ ಇತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಇದಕ್ಕೂ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ನಿಲೇಕಣಿಯಲ್ಲಿ ಸ್ಕೂಟಿಯಲ್ಲಿ ಗಾಂಜಾ ತರುತ್ತಿದ್ದ ವೇಳೆ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿತ್ತು.