ಹೊಸನಗರ ತಾಲೂಕಿನ ಪುರಪ್ಪೆಮನೆ ಮೂಲಕ ಸಾಗರ ತಾಲೂಕಿನ ಬಿಲಗೋಡಿ ತಾರನಬೈಲು ಸಂಪರ್ಕಿಸುವ ರಸ್ತೆ ಕುಸಿತವಾಗಿದೆ. ಸೋಮವಾರ ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದಾರೆ ಈ ಸಂದರ್ಭದಲ್ಲಿ ತಡಿಯ ಬಿಜೆಪಿ ಮುಖಂಡರುಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.