ಮೊಳಕಾಲ್ಮುರು:-ಪಟ್ಟಣದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ಓರ್ವ ವ್ಯಕ್ತಿಯನ್ನು ಇಬ್ಬರನ್ನು ಮೊಳಕಾಲ್ಮುರು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿನ ಪುಟ್ಬಾತ್ ರಸ್ತೆಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆಯ ಸಮಯದಲ್ಲಿ ಇಸ್ಪೀಟು ಜೂಜಾಟ ಆಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ, ಬಂಧಿತರಿಂದ 3280 ವಶಪಡಿಸಿಕೊಳ್ಳಲಾಗಿದೆ. ಪಿಎಸ್ಐ ಮಹೇಶ ಲಕ್ಷ್ಮಣ್, ಹೊಸಪೇಟೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಈ ಬಗ್ಗೆ ಸಂಜೆ 6:30ಕ್ಕೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.