ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ, ನರಸಾಪುರ ಕೈಗಾರಿಕಾ ಕೆಐಡಿಬಿ ಭೂಸ್ವಾಧಿನ ಪ್ರಕ್ರಿಯೆಯನ್ನು ಆದಷ್ಟು ಬೇಗ ರ್ಪೂಣಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಉತ್ತರ ಕರ್ನಾಟಕ ಮಹಾಸಭಾ ವತಿಯಿಂದ ಕಳೆದ ಮೂರು ವಾರಗಳಿಂದ ಜಿಲ್ಲಾಡಳಿತ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆ ಬುಧವಾರ 18ನೇ ದಿನಕ್ಕೆ ಕಾಲಿಟ್ಟಿತು. ಬುಧವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಗದಗ ಹುಬ್ಬಳ್ಳಿ ಮುಖ್ಯ ರಸ್ತೆ ತಡೆದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.