ಶಿರಾ ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯಾಗಿ ರತ್ನಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು. .ಬುಧವಾರ ಮಧ್ಯಾಹ್ನ ಸುಮಾರು 2 ರ ಸಮಯದಲ್ಲಿ ರತ್ನಮ್ಮ ಅವರ ಅವಿರೋಧವಾಗಿ ಆಯ್ಕೆ ಬಗ್ಗೆ ಚುನಾವಣೆ ಅಧಿಕಾರಿ ಘೋಷಣೆ ಮಾಡಿದರು, ಶಾರದಮ್ಮ ಅವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಉಪಾಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಹೊರತು ಪಡಿಸಿ ಬೇರೆ ಸದಸ್ಯರು ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ರತ್ನಮ್ಮ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಹುಲಿಕುಂಟೆ ರಾಮೇಗೌಡ, ನಿಡಗಟ್ಟೆ ಪಾಂಡುರಂಗಪ್ಪ, ಹುಲಿಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿಕುಮಾರ್, ನೂತನ ಉಪಾಧ್ಯಕ್ಷೆ ರತ್ನಮ್ಮ ಅಜ್ಜಣ್ಣ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದೊಡ್ಡೇಗೌಡ ಇದ್ದರು.