ದೆಹಲಿಯಲ್ಲಿ ನಡೆದ ರೈತ ಚಳವಳಿ ಮಾದರಿಯಲ್ಲಿ ನಿವೇಶನ ಮತ್ತು ವಸತಿ ರಹಿತರ ರಾಜ್ಯಮಟ್ಟದ ಜನಾಂದೋಲನ ರೂಪಿಸಲು ಭಾರತ ಕಮ್ಯುನಿಸ್ಟ್ ಪಕ್ಷ ನಿರ್ಧರಿಸಿದೆ. ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ತಿಳಿಸಿದರು. ರಾಜ್ಯದಲ್ಲಿ 7 ಲಕ್ಷ ಜನ ನಿವೇಶನ ರಹಿತರು ಹಾಗೂ 26 ಲಕ್ಷ ಜನ ವಸತಿ ರಹಿತರು ಇದ್ದಾರೆ ಎಂದರು. ಪಕ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳ ಹಿಂದೆಯೇ ಭೂಮಿ ಮತ್ತು ವಸತಿ ರಹಿತರ ಸಮಸ್ಯೆ ಕೈಗೆತ್ತಿಕೊಂಡು ಹೋರಾಟ ನಡೆಸಿದ್ದು, ಈಗ ಇದನ್ನು ರಾಜ್ಯಕ್ಕೂ ವಿಸ್ತರಿಸಲಾಗಿದೆ ಎಂದು ತಿಳಿಸಿದರು.