ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ ಎಂಬ ಡಿಕೆಶಿ ಹೇಳಿಕೆಗೆ ವಿಜಯಪುರ ನಗರದಲ್ಲಿ ಭಾನುವಾರ ರಾತ್ರಿ 8ಗಂಟೆ ಸುಮಾರಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಮುಸಲ್ಮಾನರ ಒಲಿಕೆಗೆ ಸಿಎಂ ಸಿದ್ದರಾಮಯ್ಯ ಚಿಂತೆ ಮಾಡುತ್ತಿದ್ದಾರೆ. ದಸರಾ ಉದ್ಘಾಟನೆಗೆ ಎಡಪಂಥೀಯ ಚಿಂತನೆ ಉಳ್ಳವರನ್ನು ಕರೆಯುತ್ತಿದ್ದಾರೆ. ಭಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನ ಮಾಡುತ್ತಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು.