ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 10.23 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.01 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2680.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2662.38 ಮಿ.ಮೀ ಮಳೆಯಾಗಿತ್ತು.ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 15.27 ಮಿ.ಮೀ. ಕಳೆದ ವರ್ಷ ಇದೇ ದಿನ 25.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4052.50 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3842.39 ಮಿ.ಮೀ. ಮಳೆಯಾಗಿತ್ತು.