ವೇಮಗಲ್-ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಯಾವೊಬ್ಬರು ದಲಿತರನ್ನ ಕಡೆಗಣಿಸಲೊಲ್ಲ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಯನ್ನು ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿಎಂ ಮುನಿಯಪ್ಪ ತಿಳಿಸಿದರು. ತಾಲೂಕಿನ ವೇಮಗಲ್ ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ 6 ಸ್ಥಾನಗಳಲ್ಲಿ ಗೆದ್ದು ಹಿನ್ನಡೆಯಾದ ಹಿನ್ನೆಲೆ ಕೆಲವರು ಏನೇನೂ ಮಾತನಾಡುತ್ತಿದ್ದಾರೆ. ದಲಿತ ಸಮುದಾಯದ ಹಾಗೂ ಇತರೆ ಸಮುದಾಯಗಳನ್ನ ವಿಶ್ವಾಸಕ್ಕೆ ತೆಗೆದುಕೊಳ್ಳದ ಹಿನ್ನೆಲೆ ಕಾಂಗ್ರೆಸ್ ಸೋಲು ಖಂಡಿದೆ ಎಂದು ಮಾತನಾಡುತ್ತಿದ್ದಾರೆ. ಚುನಾವಣೆ ಪ್ರಚಾರದಲ್ಲಿ ದಲಿತರನ್ನ ಯಾರು ಕಡೆಗಣಿಸಿಲ್ಲ ಎಂದ್ರು