ಔರಾದ್ : ವಿಕಲಚೇತನರ ಹಿತಾಸಕ್ತಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಎಲ್ಲ ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕೆಂದು ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಯೋಜನೆಯಡಿ ಪಟ್ಟಣದಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಆವರಣದಲ್ಲಿ ಏರ್ಪಡಿಸಿದ್ದ ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.