ಗುಣಮಟ್ಟದ ಹಾಲನ್ನು ರೈತರು ಸರಬರಾಜು ಮಾಡಿದರೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿ ಸಾಧ್ಯ. ಇದರಿಂದ ರೈತರಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ಡೈರಿ ಸಂಘದ ಅಧ್ಯಕ್ಷ ನಾರಾಯಣಪ್ಪ ಹೇಳಿದರು. ತಾಲೂಕು ಡಿಕೆ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ದೊಡ್ಡೋರು ಕರಪನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನಿಯಮಿತ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ನಾರಾಯಣಪ್ಪ ರವರ ಅಧ್ಯಕ್ಷತೆಯಲ್ಲಿ ಶನಿವಾರ 2024 -25 ನೇ ಸಾಲಿನ ಲೆಕ್ಕಪರಿಶೋಧನೆ ವರದಿ ಜಮಾ ಖರ್ಚು ಬಗ್ಗೆ ಚರ್ಚೆ ನಡೆಸಿ ಲಾಭ ನಷ್ಟ ಹಾಗೂ ಆಸ್ತಿ ಜವಾಬ್ದಾರಿ ಬಗ್ಗೆ ಓದಿ ಅಂಗೀಕರಿಸಲಾಯಿತು. 2025 -26 ನೇ ಸಾಲಿಗೆ ಅಂದಾಜು ಬಜೆಟ್ ಮಂಜೂರು ಬಗ್ಗೆ ಚರ್ಚೆ ನಡೆಸಿ ಅನುಮೋದನೆಯನ್ನು ನೀಡಲಾಗಿದೆ ಎಂದ್ರು