ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಮಹೋತ್ಸವ ಮೆರವಣಿಗೆಯು ಸೆ. 13 ರಂದು ಮಧ್ಯಾಹ್ನ 12 ರ ಸಮಯದಲ್ಲಿ ನಡೆಯಲಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಹಿಂದೂ ಮಹಾಗಣಪತಿ ಸ್ವಾಗತ ಸಮಿತಿ ಅಧ್ಯಕ್ಷರು ಆದ ವೀರಶೈವ ಸಮಾಜದ ಮಾಜಿ ಅಧ್ಯಕ್ಷ ಟಿ. ಬಿ. ಶೇಖರ್ ಹೇಳಿದರು. ಗುರುವಾರ ಮಧ್ಯಾಹ್ನ 1.20 ರ ಸಮಯದಲ್ಲಿ ತುಮಕೂರಿನ ಗಾರ್ಡನ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಾತನಾಡಿದರು. ಮಾಜಿ ಸಚಿವ ಕೆ. ಎನ್. ರಾಜಣ್ಣ, ವಿಪ ಸದಸ್ಯ ರಾಜೇಂದ್ರ ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್, ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಹಲವು ಮಠಾಧೀಷರು ಭಾಗವಹಿಸಲಿದ್ದಾರೆ ಎಂದರು.