ವಚನ ಸಾಹಿತ್ಯದ ಸಾಮಾಜಿಕ ರಾಜಕೀಯ ನಿಲುವುಗಳ ಪ್ರಸ್ತುತತೆ ಕುರಿತು ಆಗಸ್ಟ್ ೩೦ ರಂದು ಬೆಳ್ಳಿಗ್ಗೆ ೧೦ ಗಂಟೆಗೆ ಒಂದು ದಿನದ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ ಎಂದು ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ನೀಲಕ್ಕ ಪಾಟೀಲ ತಿಳಿಸಿದರು. ನಗರದ ಸುದ್ದಿಗೋಷ್ಟಿಯಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಮಾತನಾಡಿ, ಬಸವ ಸಮಿತಿ ಅಧ್ಯಕ್ಷ ಡಾ.ಅರವಿಂದ ಜತ್ತಿ ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ ಎಂದರು.