ಬೆಂಗಳೂರು: 'ಮೆಟ್ರೊ ನಿಲ್ದಾಣಗಳಿಗೆ ಸಾಹಿತಿಗಳು ಹಾಗೂ ಕನ್ನಡ ಪರ ಹೋರಾಟಗಾರರ ಹೆಸರಿಡಬೇಕು' ಎಂದುಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅವರು ಸರ್ಕಾರಕ್ಕೆ ಆಗ್ರಹಿಸಿದರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಡಾ.ಗೊರೂರು ಸಾಹಿತ್ಯ ಪ್ರತಿಷ್ಠಾನ ಜಂಟಿಯಾಗಿ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದಗೊರೂರು ಸ್ಮರಣೆ ಸಮಾರಂಭದಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಹಾಗೂ ಮರಣೋತ್ತರವಾಗಿ ಆಯ್ಕೆಯಾಗಿದ್ದ ಕವಿಎಚ್.ಎಸ್. ವೆಂಕಟೇಶಮೂರ್ತಿ ಅವರ ಪರವಾಗಿ ಪುತ್ರ ಸುಧೀರ್ ಅವರಿಗೆ 'ಗೊರೂರು ಪ್ರಶಸ್ತಿ' ಪ್ರದಾನ ಮಾಡಲಾಯಿತು.