ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಆರೋಪಿ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಂಡಿದೆ ಎಂದು ನೇಹಾ ಹಿರೇಮಠ ಪೋಷಕರು ಪರ ವಕೀಲರಾದ ರಾಘವೇಂದ್ರ ಮುತ್ತಗಿಕರ ತಿಳಿಸಿದರು. ಧಾರವಾಡ ನಗರದಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದೆ. ಇನ್ನೂ ಎರಡು ಕಡೆಯ ವಾದಗಳನ್ನು ಆಲಿಸಿ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.