ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಗದ್ಗುರು ಶಿವರಾತ್ರಿ ರಾಜೇಂದ್ರ ಕಲಾ ಬಳಗದ ನಟರಾಜು ಮಾತನಾಡಿ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾ ಸ್ವಾಮೀಜಿ ಅವರ 110ನೇ ಜಯಂತಿ ಮಹೋತ್ಸವದ ಅಂಗವಾಗಿ ಆ.29 ರಂದು ಮೈಸೂರಿನ ಸುತ್ತೂರು ಮಠದಲ್ಲಿ ಪ್ರಭುಲಿಂಗ ಲೀಲೆ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಅಂದು ರಾತ್ರಿ 9 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠದ ಆವರಣದಲ್ಲಿ ನಾಟಕ ಪ್ರದರ್ಶನವನ್ನು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು