ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಆರ್‌ಎಸ್‌ಎಸ್ ಗೀತೆ ಹಾಡಿದ್ದನ್ನ ಸ್ವಾಗತಿಸುತ್ತೇವೆ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸದಾಶಿವನಗರದಲ್ಲಿ ಪ್ರತಿಕ್ರಿಯಿಸಿದ ಅವರು ಡಿಕೆಶಿಗೆ ಆರ್‌ಎಸ್‌ಎಸ್ ಬಗ್ಗೆ ಒಳ್ಳೆಯ ಭಾವನೆ ಇದೆ. ಆರ್‌ಎಸ್‌ಎಸ್ ಗೀತೆ `ನಮಸ್ತೇ ಸದಾ ವತ್ಸಲೇ ಮಾತೃಭೂಮೇ’ ಹಾಡಿರುವುದನ್ನ ಸ್ವಾಗತಿಸುತ್ತೇನೆ ಎಂದಿದ್ದಾರೆ. ಡಿ.ಕೆ ಶಿವಕುಮಾರ್ ಯಾವ ಮನಸ್ಥಿತಿ ಇಟ್ಕೊಂಡು ಹೇಳಿದ್ದಾರೋ ಗೊತ್ತಿಲ್ಲ. ಯಾರೇ ಆದ್ರೂ ಸರಿ ಆರ್‌ಎಸ್‌ಎಸ್ ಮೇಲೆ ಗೌರವ ಇಡಬಹುದು. ಆದ್ರೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಆರ್‌ಎಸ್‌ಎಸ್‌ನ ವಿರೋಧಿಸುತ್ತಾರೆ ಎಂದಿದ್ದಾರೆ.