ಖಾಸಗಿ ಶಿಕ್ಷಣ ಸಂಸ್ಥೆ ರೂಪ್ಸಾ ವಿರುದ್ಧ ಸೂಕ್ತ ಕ್ರಮಕ್ಕೆ ತಾಲ್ಲೂಕು ಕಚೇರಿ ಮುಂದೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಆಗ್ರಹಿಸಿದರು.ತಾಲ್ಲೂಕು ಕಚೇರಿ ಮುಂಭಾಗ ತಹಶೀಲ್ದಾರ್ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಅವರು, ಸಂಘಟನೆ ಮುಖ್ಯಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಗ್ರಹಿಸಿದರು. ಈಗಾಗಲೇ 5,8,9ನೇ ತರಗತಿ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಯನ್ನು ಸರ್ಕಾರ 2023ರಲ್ಲಿ ನಿಗದಿ ಮಾಡಿದ್ದು, ನಿಗದಿಯಂತೆ ಎರಡು ಪರೀಕ್ಷೆ ನಡೆದಿರುತ್ತವೆ. ಆದರೆ ಖಾಸಗಿ ಶಿಕ್ಷಣ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿ ಲಕ್ಷಾಂತರ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.