ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ಪೊಲೀಸ್ ಅಧಿಕಾರಿಗಳಿಂದ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪಟ್ಟಣದ ಹಿಂದೂ ಮತ್ತು ಮುಸ್ಲಿಂ ಮುಖಂಡರೊಂದಿಗೆ ಶಾಂತಿಸಭೆ ನಡೆಸಿದರು. ಆಲಮೇಲ ಪಟ್ಟಣದಲ್ಲಿ ಹಿಂದೂ ಮತ್ತು ಮುಸ್ಲಿಮರು ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಅರ್ಥಪೂರ್ಣವಾಗಿ ಆಚರಿಸಬೇಕು ಯಾವುದೇ ಅಹಿತಕರ ಘಟನೆ ಕಂಡು ಬಂದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಪಟ್ಟಣದ ಮುಖಂಡರುಗಳು ಶಾಂತಿ ಸಭೆಯಲ್ಲಿ ಭಾಗಿಯಾಗಿದ್ದರು.