ಮಲೆನಾಡು ಭಾಗದಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರಿದಿದೆ. ಅತಿಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಜಲಾಶಯದಿಂದ ಶರಾವತಿ ನದಿಗೆ ನೀರನ್ನು ಹೊರ ಬಿಡಲಾಗುತ್ತಿದ್ದು, ನೀರನ್ನು ನದಿಗೆ ಬಿಡುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ ಹಾಲ್ನೊರೆಯಂತೆ ಮೈದುಂಬಿ ಹರಿಯುತ್ತಿದೆ. ಗುರುವಾರ ವಿಶ್ವವಿಖ್ಯಾತ ಜೋಗ ಜಲಪಾತ ನೋಡಲು ಪ್ರವಾಸಿಗರ ದಂಡು ಆಗಮಿಸುತ್ತಿದೆ