ಮಳವಳ್ಳಿ : ರಾಜ್ಯದಲ್ಲಿ ದೇವದಾಸಿ ಪದ್ದತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಮತ್ತೊಮ್ಮೆ ಸಮೀಕ್ಷೆ ಕಾರ್ಯ ಆರಂಭಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರೂ ಆದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ತಿಳಿಸಿದ್ದಾರೆ. ಮಳವಳ್ಳಿ ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಸಾಯಂಕಾಲ 5.30 ರ ಸಮಯ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸಕ್ಷಮ್ ಅಂಗನವಾಡಿ 2.0 ಯೋಜನೆಯಡಿ 95 ಅಂಗನವಾಡಿ ಕೇಂದ್ರಗಳಿಗೆ ಎಲ್ಇಡಿ ವಿತರಣೆ ಹಾಗೂ ಬಾಲ್ಯ ವಿವಾಹ ನಿಷೇಧ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಾಗೃತ ಸಭೆಯಲ್ಲಿ ದೇವ ದಾಸಿ ಪದ್ದತಿಯ ಬಗ್ಗೆ ಗಮನ ಸೆಳೆಯಲಾಗಿದೆ ಎಂದರು.