ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊನ್ನಟಗಿ ಮದರಕಲ್ ಗ್ರಾಮಗಳ ಸಂಪರ್ಕದ ಕಲ್ಪಿಸುವ ರಸ್ತೆ ದುರಸ್ತಿಗೊಳಿಸುವಂತೆ ಹೋರಾಟಗಾರರು ಒತ್ತಾಯಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ದೇವದುರ್ಗ ಪಟ್ಟಣದಲ್ಲಿ ಈ ಕುರಿತು ಹೇಳಿಕೆ ನೀಡಿ, ಯಾದಗಿರಿ ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆ ಮೂಲಕ ನಿತ್ಯ ನೂರಾರು ವಾಹನಗಳು ಓಡಾಟ ನಡೆಸುತ್ತವೆ.ರಸ್ತೆ ಹಾಳಾಗಿದ್ದರಿಂದ ವಾಹನಗಳ ಓಡಾಟಕ್ಕೆ ತುಂಬಾ ತೊಂದರೆ ಉಂಟಾಗಿದೆ. ರಸ್ತೆ ದುರಸ್ತಿಗೊಳಿಸಲು ತಹಶೀಲ್ದಾರರಿಗೆ ಶಾಸಕರಿಗೆ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ. ಒಂದು ವಾರದೊಳಗೆ ರಸ್ತೆ ದುರಸ್ತಿ ಮಾಡದಿದ್ದಲ್ಲಿ ಲೋಕೋಪಯೋಗಿ ಇಲಾಖೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವುದಾಗಿ ಹೋರಾಟಗಾರ ಶರಣಗೌಡ ಎಚ್ಚರಿಸಿದ್ದಾರೆ.